alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಹತ್ಯೆಗೈದ ಶಾಸಕನ ಸಹೋದರರು

representational image

ರಾಜಕಾರಣಿಗಳ ಸಂಬಂಧಿಕರ ಅಟಾಟೋಪ ಇತ್ತೀಚೆಗೆ ಹೆಚ್ಚಾಗತೊಡಗಿದೆ. ಮಂತ್ರಿ ಮಗನೊಬ್ಬ ಕುಡಿದ ಅಮಲಿನಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದ ಬೆನ್ನಲ್ಲೇ ಕ್ಷುಲ್ಲಕ ಕಾರಣಕ್ಕೆ ಶಾಸಕನ ಸಹೋದರರು ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ತಾವು ಬರುತ್ತಿದ್ದ ಜೀಪಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆಯಿತೆಂಬ ಕಾರಣಕ್ಕೆ ಸಿಟ್ಟಿಗೆದ್ದ ಬಲರಾಂಪುರ್ ಸದರ್ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ಜಗ್ರಾಮ್ ಪಾಸ್ವಾನ್ ರ ಸಹೋದರರು 32 ವರ್ಷದ ಜೈರಾಮ್ ಯಾದವ್ ಎಂಬಾತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಬಲರಾಂಪುರ್- ಗೊಂಡಾ ವ್ಯಾಪ್ತಿಯಲ್ಲಿ ಶಾಸಕ ಜಗ್ರಾಮ್ ಪಾಸ್ವಾನ್ ಸಹೋದರರಾದ ಅನ್ನು ಪಾಸ್ವಾನ್, ಪಪ್ಪು ಪಾಸ್ವಾನ್ ಹಾಗೂ ಅಂಗದ್ ಪಾಸ್ವಾನ್ ಜೀಪಿನಲ್ಲಿ ಬರುತ್ತಿದ್ದು, ಜೈರಾಮ್ ಯಾದವ್ ರ ವಾಹನ ಆಕಸ್ಮಿಕವಾಗಿ ಈ ಜೀಪಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪರಸ್ಪರ ವಾಗ್ವಾದ ನಡೆದು ಅಂತಿಮವಾಗಿ ಜೈರಾಮ್ ಯಾದವ್ ಮೇಲೆ ಗುಂಡು ಹಾರಿಸಿ ಶಾಸಕನ ಸಹೋದರರು ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಜೈರಾಮ್ ಯಾದವ್ ರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಶಾಸಕರ ಮನೆ ಸೇರಿದಂತೆ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಜೊತೆಗೆ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...