alex Certify
ಕನ್ನಡ ದುನಿಯಾ       Mobile App
       

Kannada Duniya

ಮಾನವ ಕುಲವನ್ನೇ ತಲೆತಗ್ಗಿಸುವಂತೆ ಮಾಡಿದೆ ಈ ಘಟನೆ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಿಬಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯೊಂದು ಇಡೀ ಮಾನವ ಕುಲವನ್ನು ತಲೆ ತಗ್ಗಿಸುವಂತೆ ಮಾಡಿದೆ.

ತನ್ನ ಪತ್ನಿ ಎರಡನೇ ಬಾರಿಯೂ ಹೆಣ್ಣು ಮಗುವನ್ನು ಹೆತ್ತಳೆಂಬ ಕಾರಣಕ್ಕೆ ಪಾನಮತ್ತ ವ್ಯಕ್ತಿಯೊಬ್ಬ ತನ್ನ ಮೊದಲ ಮಗಳನ್ನು ಟೆರೇಸ್ ಮೇಲಿನಿಂದ ಎಸೆದಿದ್ದು, ತೀವ್ರವಾಗಿ ಗಾಯಗೊಂಡ ಆ ಮಗು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ಸಿಬಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ದೌಲಿ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಅರವಿಂದ್ ಗಂಗ್ವಾರ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಎರಡನೇ ಬಾರಿಗೂ ಹೆಣ್ಣು ಮಗಳನ್ನು ಹೆತ್ತಳೆಂಬ ಕ್ಷುಲ್ಲಕ ಕಾರಣಕ್ಕೆ ಮೊದಲ ಮಗಳನ್ನು ಟೆರೇಸ್ ಮೇಲಿನಿಂದ ಬಿಸಾಡಿ, ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಈಗ ಆತನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...