alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಾಮುಕ

up-kamuk

ಹಾರ್ದೊಯಿ(ಉತ್ತರ ಪ್ರದೇಶ): ಮನೆಯ ಸಮೀಪದಲ್ಲಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಲು ಮುಂದಾದ ಕಾಮುಕನಿಗೆ ಗ್ರಾಮಸ್ಥರು ಸರಿಯಾಗಿಯೇ ಪಾಠ ಕಲಿಸಿದ್ದಾರೆ.

ಉತ್ತರ ಪ್ರದೇಶದ ಹಾರ್ದೊಯಿಯಲ್ಲಿ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ವೇಳೆಯಲ್ಲಿ ಗ್ರಾಮಸ್ಥರಿಗೆ ಸಿಕ್ಕಿಬಿದ್ದಿದ್ದಾನೆ.

ಆತನನ್ನು ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು ತಲೆ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹರ್ದೊಯಿ ಪೊಲೀಸ್ ಅಧೀಕ್ಷಕ ವಿಪಿನ್ ಕುಮಾರ್ ಮಿಶ್ರಾ ಈ ಕುರಿತು ಮಾಹಿತಿ ನೀಡಿದ್ದು, ಬಲಭದ್ರ ಅಲಿಯಾಸ್ ಮಸ್ತಾನಾ ಎಂಬ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...