alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗಿ ಸಂಪುಟದಲ್ಲಿ ಕಾಣಿಸಿಕೊಂಡ ಭಿನ್ನಮತ: ರಾಜೀನಾಮೆ ಬೆದರಿಕೆ ಒಡ್ಡಿದ ಸಚಿವ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರೆಸಿರುವ ಹಿಂದುಳಿದ ವರ್ಗ ಹಾಗೂ ಕಲ್ಯಾಣ ಖಾತೆ ಸಚಿವ ಓಂ ಪ್ರಕಾಶ್ ರಾಜ್ಫರ್ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಸಿಎಂ ಯೋಗಿ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದ್ರೆ ನಾನು ನಿಮ್ಮ ಜೊತೆ ಇರುವುದಿಲ್ಲವೆಂದು ರಾಜ್ಫುರ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಸುಹೇಲ್ ದೇವ್ ಭಾರತೀಯ ಸಮಾಜ್ ಪಾರ್ಟಿ ಅಧ್ಯಕ್ಷರೂ ಆಗಿರುವ ರಾಜ್ಫರ್, ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವಂತೆ ಕರೆ ನೀಡಿದ್ದಾರೆ. ಯೋಗಿ ಸರ್ಕಾರದಲ್ಲಿ ಭ್ರಷ್ಟಾಚಾರವಿಲ್ಲ ಎಂಬುದು ಸುಳ್ಳು. ಹಿಂದೆ 500 ರೂಪಾಯಿಯಿದ್ದ ಭ್ರಷ್ಟಾಚಾರ ಈಗ 5 ಸಾವಿರಕ್ಕೇರಿದೆ ಎಂದಿದ್ದಾರೆ.

ಈ ಮಧ್ಯೆ ರಾಜ್ಫುರ್ ವಿರುದ್ಧ ರಾಜ್ಯ ಸಚಿವ ಅನಿಲ್ ರಾಜ್ಫರ್ ಪ್ರತಿಭಟನೆ ಶುರುಮಾಡಿದ್ದಾರೆ. ಸುಳ್ಳು ಮಾಹಿತಿ ನೀಡಿ ರಾಜ್ಫುರ್ ಜನರ ಹಾದಿ ತಪ್ಪಿಸುತ್ತಿದ್ದಾರೆ. ಲೋಕಸಭೆಯಲ್ಲಿ ಮಗನಿಗೆ ಟಿಕೆಟ್ ಕೊಡಿಸುವುದು ಅವ್ರ ಉದ್ದೇಶ. ಅದಕ್ಕಾಗಿ ಈಗ್ಲೇ ಒತ್ತಡ ಹೇರುತ್ತಿದ್ದಾರೆಂದು ಅನಿಲ್  ದೂರಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...