alex Certify
ಕನ್ನಡ ದುನಿಯಾ       Mobile App
       

Kannada Duniya

ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಾಕಾರಿ ಪೋಸ್ಟ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರ್.ಎಸ್.ಎಸ್. ವಿರುದ್ಧ ಸಾಮಾಜಿಕ ತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಐವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಣಾ ಸುಲ್ತಾನ್ ಜಾವೇದ್, ಶೀಶನ್, ಹಾರೂನ್ ಖಾನ್, ಶಫೀಕ್ ಮತ್ತು ಕಿಂಗ್ ಖಾನ್ ಎಂಬುವರು ಮುಖ್ಯಮಂತ್ರಿ ಹಾಗೂ ಆರ್.ಎಸ್.ಎಸ್. ವಿರುದ್ಧ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದ್ದು, ಈವರೆಗೆ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆದು, ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಈ ಹಿಂದೆಯೂ ಉತ್ತರ ಪ್ರದೇಶ ಸಿಎಂ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...