alex Certify
ಕನ್ನಡ ದುನಿಯಾ       Mobile App
       

Kannada Duniya

CM ಭಾವಚಿತ್ರದೊಂದಿಗೆ ಮದುವೆಯಾದ್ಲು ಮಹಿಳೆ…!

ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆಯಲು ವಿಭಿನ್ನ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆ ಮೂಲಕ ತಮ್ಮ ಬೇಡಿಕೆಗಳ ಕುರಿತು ಆಡಳಿತರೂಢರ ಗಮನ ಸೆಳೆಯಲು ಹಾಗೂ ಆ ಮೂಲಕ ಬೇಡಿಕೆ ಈಡೇರಿಸಿಕೊಳ್ಳಲು ಹೋರಾಟಗಾರರು ಯತ್ನಿಸುತ್ತಾರೆ.

ಇದೇ ರೀತಿ ಇಲ್ಲೊಂದು ವಿಭಿನ್ನ ರೀತಿಯ ಪ್ರತಿಭಟನೆ ನಡೆದಿದೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದ ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರ ಪೈಕಿ ಓರ್ವ ಮಹಿಳೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಸಂಘದ ಜಿಲ್ಲಾಧ್ಯಕ್ಷೆ ನೀತೂ ಸಿಂಗ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರ ಭಾವಚಿತ್ರದೊಂದಿಗೆ ಅಣಕು ವಿವಾಹ ಮಾಡಿಕೊಂಡಿದ್ದಾರೆ. ಜೊತೆಗೆ ಈಗಲಾದರೂ ಮುಖ್ಯಮಂತ್ರಿಗಳಿಗೆ ನಮ್ಮಗಳ ಸಂಕಷ್ಟ ಅರಿವಾಗಬಹುದೇನೋ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...