alex Certify
ಕನ್ನಡ ದುನಿಯಾ       Mobile App
       

Kannada Duniya

ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದ ಅಮೆರಿಕಾ ರಾಯಭಾರ ಕಛೇರಿ

police_deployed12ಭಾನುವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರಿಗೆ ತಜ್ಞ ವೈದ್ಯರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ.

ಈ ಮಧ್ಯೆ ಚೆನ್ನೈನಲ್ಲಿರುವ ಅಮೆರಿಕಾ ರಾಯಭಾರ ಕಛೇರಿ ತಾತ್ಕಾಲಿಕವಾಗಿ ತನ್ನ ಸೇವೆಯನ್ನು ಸ್ಥಗಿತಗೊಳಿಸಿದ್ದು, ವೀಸಾಗಾಗಿ ಈಗಾಗಲೇ ಅಪಾಯಿಂಟ್ಮೆಂಟ್ ತೆಗೆದುಕೊಂಡಿದ್ದವರಿಗೆ ಮುಂದಿನ ದಿನಾಂಕವನ್ನು ಇ ಮೇಲ್ ಮೂಲಕ ತಿಳಿಸಲಾಗುವುದು ಎಂದು ಹೇಳಿದೆ.

ಅಲ್ಲದೇ ತಮಿಳುನಾಡಿನಲ್ಲಿರುವ ಅಮೆರಿಕಾ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದ್ದು, ಸ್ಥಳೀಯ ವಿದ್ಯಾಮಾನಗಳ ಕುರಿತು ನಿಗಾ ವಹಿಸುವಂತೆ ತಿಳಿಸಲಾಗಿದೆ. ತನ್ನ ಪ್ರಕಟಣೆಯಲ್ಲಿ ಯಾವುದೇ ಕಾರಣವನ್ನೂ ಉಲ್ಲೇಖಿಸದ ಅಮೆರಿಕಾ ರಾಯಭಾರ ಕಛೇರಿ, ಅಮೆರಿಕಾ ಪ್ರಜೆಗಳು ತಮಿಳುನಾಡಿನಾದ್ಯಂತ ಪ್ರಯಾಣ ಮಾಡುವಾಗ ಪರಿಸ್ಥಿತಿಯನ್ನು ಅವಲೋಕಿಸಿ ಮುಂದುವರೆಯಿರಿ ಎಂಬ ಸಲಹೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...