alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಲಾಸ್ ರೂಂ ನಲ್ಲಿ ಮೊಬೈಲ್ ಬಳಸಿದ್ರೆ ಬೀಳುತ್ತೆ ಫೈನ್

Mobile Banವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿರುವುದು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯ ಮುಂದಾಗಿದೆ. ಕ್ಲಾಸ್ ರೂಮ್, ಲ್ಯಾಬ್ ಹಾಗೂ ಕಛೇರಿಯಲ್ಲಿ ಮೊಬೈಲ್ ಬಳಸಿದರೆ ಭಾರೀ ದಂಡ ವಿಧಿಸಲು ತೀರ್ಮಾನಿಸಲಾಗಿದೆ.

ಈ ಹಿಂದೆಯೇ ಈ ನಿಯಮವನ್ನು ಜಾರಿಗೆ ತರಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬರದೆ ಕೇವಲ ಆದೇಶವಾಗಿಯೇ ಉಳಿದಿತ್ತು. ಇದೀಗ ಗಿಂಡಿಯ ಇಂಜಿನಿಯರಿಂಗ್ ಕಾಲೇಜ್ ಸುತ್ತೋಲೆಯೊಂದನ್ನು ಹೊರಡಿಸಿದ್ದು, ತರಗತಿ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ಕಂಡು ಬಂದಲ್ಲಿ ಅಂತವರಿಗೆ 10 ಸಾವಿರ ರೂ. ಗಳವರೆಗೆ ದಂಡ ವಿಧಿಸಲಾಗುವುದೆಂದು ತಿಳಿಸಿದೆ.

ಜೊತೆಗೆ ಅಂತಹ ಮೊಬೈಲ್ ನ್ನು ಮುಟ್ಟುಗೋಲು ಹಾಕಿಕೊಳ್ಳುವುದಲ್ಲದೇ ವಿದ್ಯಾರ್ಥಿಯ ಶೈಕ್ಷಣಿಕ ವರ್ಷ ಮುಗಿದ ಬಳಿಕ ಅದನ್ನು ಹಿಂದಿರುಗಿಸಲಾಗುವುದೆಂದು ತಿಳಿಸಿದೆ. ಈ ಹಿಂದೆ ಹಾಸ್ಟೆಲ್ ಗಳಲ್ಲೂ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...