alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ

rail-up-durant

ನವದೆಹಲಿ: ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಶನಿವಾರ ಸಂಜೆ ನಡೆದ ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತದಲ್ಲಿ 22 ಮಂದಿ ಸಾವನ್ನಪ್ಪಿದ್ದು, 90 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ದುರಂತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ನಿಗದಿತ ಅವಧಿಯೊಳಗೆ ಹಳಿ ನಿರ್ವಹಣೆ ಕಾರ್ಯ ಮುಗಿಸದ ಕಾರಣ ರೈಲಿನ 7 ಬೋಗಿಗಳು ಹಳಿತಪ್ಪಿದ್ದವು.

ರೈಲ್ವೇ ಸಚಿವ ಸುರೇಶ್ ಪ್ರಭು ಸೂಚನೆಯಂತೆ ರೈಲ್ವೇ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.

ಅದರಂತೆ ನಿರ್ಲಕ್ಷ್ಯ ತೋರಿದ ನಾಲ್ವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಮೂವರು ಹಿರಿಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

ಪೂರ್ವಾನುಮತಿ ಪಡೆಯದೇ ಹಳಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. 20 ನಿಮಿಷದೊಳಗೆ ನಿರ್ವಹಣೆ ಕಾಮಗಾರಿ ಪೂರ್ಣಗೊಳಿಸುವಂತೆ ಇಂಜಿನಿಯರ್ ಸೂಚಿಸಿದ್ದರೂ, ನಿರ್ವಹಣಾ ಕಾರ್ಯದಲ್ಲಿ ಭಾಗಿಯಾಗಿದ್ದವರು ನಿರ್ಲಕ್ಷ್ಯ ತೋರಿದ್ದರು. ಇದೇ ಅವಘಡಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...