alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್.ಸಿ.ಟಿ.ಇ. ಪದವೀಧರರಿಗೆ ಯುಪಿ ಸರ್ಕಾರದಿಂದ ಖುಷಿ ಸುದ್ದಿ

ಉತ್ತರ ಪ್ರದೇಶದಲ್ಲಿ ಶಿಕ್ಷಕರಾಗಿ ಆಯ್ಕೆಯಾಗೋದು ಈಗ ಸುಲಭದ ಮಾತಲ್ಲ. ಸ್ಥಳೀಯ ಸರ್ಕಾರ ಕೇವಲ ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಿಲ್ಲ. ಎನ್.ಸಿ.ಟಿ.ಇ. ಪದವಿ ಪಡೆದ ದೇಶದ ಯಾವ ಅಭ್ಯರ್ಥಿ ಬೇಕಾದ್ರೂ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಮಂಗಳವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸಿಕ್ಕಿದೆ. ದೇಶದ ಅರ್ಹ ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ನೌಕರಿ ನೀಡಬಹುದೆಂದು ಹೈಕೋರ್ಟ್ ಸೂಚನೆ ನೀಡಿದೆ. ಉತ್ತರ ಪ್ರದೇಶ ಮೂಲ ಶಿಕ್ಷಣ ಮಂಡಲಿ ಸೇವಾ ನಿಯಮಾವಳಿ -1981ರ 21ನೇ ತಿದ್ದುಪಡಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಪ್ರಾಥಮಿಕ ಶಾಲೆಗಳ ಶಿಕ್ಷಕರ ನೇಮಕಾತಿಯಲ್ಲಿ ಈವರೆಗೆ ಕೇವಲ ರಾಜ್ಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿತ್ತು. ಆದ್ರೆ ಎನ್.ಸಿ.ಟಿ.ಇ. ಪದವಿಗೆ ಒಪ್ಪಿಗೆ ಸಿಕ್ಕಿರುವುದ್ರಿಂದ ದೇಶದ ಯಾವುದೇ ಮೂಲೆಯಲ್ಲಿರುವ ಪದವೀಧರ ಕೂಡ ಉತ್ತರ ಪ್ರದೇಶ ಪ್ರಾಥಮಿಕ ಶಾಲೆಗಳ ಶಿಕ್ಷಕನಾಗಿ ಕೆಲಸ ಮಾಡಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...