alex Certify
ಕನ್ನಡ ದುನಿಯಾ       Mobile App
       

Kannada Duniya

ವಿಷಪೂರಿತ ತಾಯಿ ಎದೆಹಾಲು ಕುಡಿದಿದ್ದ ಮಗು ಸಾವು

ಉತ್ತರ ಪ್ರದೇಶದಲ್ಲೊಂದು ದಾರುಣ ಘಟನೆ ನಡೆದಿದೆ. ಮಹಿಳೆಯೊಬ್ಬಳು ಮಲಗಿದ್ದ ವೇಳೆ ವಿಷಪೂರಿತ ಹಾವು ಕಡಿದಿದ್ದು, ಇದರ ಅರಿವಿಲ್ಲದೇ ಆಕೆ ತನ್ನ ಮಗುವಿಗೆ ಹಾಲು ಕುಡಿಸಿದ ಪರಿಣಾಮ ತಾಯಿ-ಮಗು ಇಬ್ಬರೂ ಸಾವನ್ನಪ್ಪಿದ್ದಾರೆ.

35 ವರ್ಷದ ಈ ಮಹಿಳೆ ತನ್ನ ಮನೆಯಲ್ಲಿ ಮಲಗಿರುವಾಗಲೇ ಹಾವು ಕಚ್ಚಿದೆ ಎನ್ನಲಾಗಿದ್ದು, ನಿದ್ರೆಯ ಮಂಪರಿನಲ್ಲಿದ್ದ ಆಕೆಗೆ ಇದರ ಅರಿವಾಗಿಲ್ಲ. ಹಾಗೆಯೇ ಆಕೆ ತನ್ನ ಮೂರು ವರ್ಷದ ಹೆಣ್ಣು ಮಗುವಿಗೆ ಎದೆಹಾಲು ಕುಡಿಸಿದ್ದು, ಕೆಲ ಹೊತ್ತಿನಲ್ಲೇ ತಾಯಿ, ಮಗು ಇಬ್ಬರೂ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

ಬಳಿಕ ಕುಟುಂಬಸ್ಥರು, ತಾಯಿ-ಮಗುವನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಾಗಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ವೇಳೆ ಹಾವು ಕಚ್ಚಿದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಮಹಿಳೆ ಮಲಗಿದ್ದ ಪಕ್ಕದ ಕೊಠಡಿಯಲ್ಲಿ ವಿಷಪೂರಿತ ಹಾವು ಪತ್ತೆಯಾಗಿದ್ದು, ಇದನ್ನು ಪುಷ್ಟೀಕರಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...