alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಮತ್ತಿನಲ್ಲಿದ್ದ ಪೊಲೀಸಪ್ಪನಿಗೆ ಬಿತ್ತು ಒದೆ

ಬುಲಂದ್ಶಹರ್ ನ ಸಿಕಂದರಾಬಾದ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಒದೆ ನೀಡಿದ ವಿಡಿಯೋ ವೈರಲ್ ಆಗಿದೆ. ಪೊಲೀಸ್ ಅಧಿಕಾರಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ಕಾರು ನಿಯಂತ್ರಣ ತಪ್ಪಿ ಎರಡು ಮೋಟರ್ ಸೈಕಲ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.

ಘಟನೆ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ. ಬಟ್ಟೆ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸೋಮವಾರ ನಡೆದಿದೆ ಎನ್ನಲಾಗಿದೆ. ಮದ್ಯದ ನಶೆಯಲ್ಲಿದ್ದ ಪೊಲೀಸ್ ಕಾನ್ವರ್ ಯಾತ್ರೆ ಡ್ಯೂಟಿಯಲ್ಲಿದ್ದ ಎನ್ನಲಾಗಿದೆ.

ಕಾರು ನಿಯಂತ್ರಣ ತಪ್ಪಿ ಎರಡು ಮೋಟರ್ ಸೈಕಲ್ ಗೆ ಗುದ್ದಿದ್ದಲ್ಲದೆ ಮರಕ್ಕೆ ಡಿಕ್ಕಿ ಹೊಡೆದಿದೆ. ಪೊಲೀಸಪ್ಪನಿಗೆ ಥಳಿಸಿದ ಸ್ಥಳೀಯರು ನಂತ್ರ ಸ್ಥಳೀಯ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...