alex Certify
ಕನ್ನಡ ದುನಿಯಾ       Mobile App
       

Kannada Duniya

ಕಟ್ಟಡ ಕುಸಿಯುವ ಕೆಲ ಗಂಟೆ ಮೊದಲು ಮನೆ ಖಾಲಿ ಮಾಡಿತ್ತು ಕುಟುಂಬ

ಗ್ರೇಟರ್ ನೋಯ್ಡಾದ ಶಾಬೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿರ್ಮಾಣ ಹಂತದಲ್ಲಿದ್ದ ಎರಡು ಬಹು ಮಹಡಿ ಕಟ್ಟಡಗಳು ಕುಸಿದು ಬಿದ್ದಿವೆ. ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ವಾಲಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

6 ಅಂತಸ್ತಿನ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಹಳೆ ಕಟ್ಟಡದ ಮೇಲೆ ವಾಲಿದೆ. ಹಳೆ ಕಟ್ಟಡದಲ್ಲಿ ಕೆಲ ಕುಟುಂಬ ವಾಸವಾಗಿತ್ತು ಎನ್ನಲಾಗಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕಾರ್ಮಿಕರು ಮಲಗಿದ್ದರಂತೆ. ಕಳಪೆ ನಿರ್ಮಾಣವೇ ಘಟನೆಗೆ ಕಾರಣ ಎನ್ನಲಾಗ್ತಿದೆ. ಬಿಲ್ಡರ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವಶೇಷಗಳಡಿ 20 ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆಯಿದೆ. ಘಟನೆ ನಡೆಯುವ ಕೆಲ ಗಂಟೆಗಳ ಹಿಂದೆ ಕುಟುಂಬವೊಂದು ಕಟ್ಟಡದಲ್ಲಿದ್ದ ಮನೆ ಖಾಲಿ ಮಾಡಿತ್ತಂತೆ. 4-5 ಮಂದಿ ಬೇರೆ ಮನೆಗೆ ಶಿಫ್ಟ್ ಆಗಿದ್ದರಂತೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿ 12 ಆಂಬುಲೆನ್ಸ್ ಇದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ನಡೆಯುತ್ತಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...