alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸೇರ್ಪಡೆಗೆ ಸಜ್ಜಾದ ಬಾಲಿವುಡ್ ಸ್ಟಾರ್ಸ್

bjp-join

ಪಂಚ ರಾಜ್ಯಗಳ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ತಾರೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಸರತ್ತು ಆರಂಭಿಸಿವೆ. ಹೇಗಾದ್ರೂ ಮಾಡಿ ಖ್ಯಾತ ನಟ-ನಟಿಯರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೀತಾ ಇದೆ. ಬಾಲಿವುಡ್ ನ ಖ್ಯಾತ ನಟರಾದ ಜಾಕಿಶ್ರಾಫ್ ಹಾಗೂ ಅರ್ಜುನ್ ರಾಂಪಾಲ್ ಸದ್ಯದಲ್ಲೇ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಈ ನಟರು ಬಿಜೆಪಿಯ ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸ್ಟಾರ್ ಕ್ಯಾಂಪೇನರ್ ಗಳಾಗಿ ಗುರುತಿಸಿಕೊಳ್ಳಲಿದ್ದಾರೆ. ಪಕ್ಷ ಸೇರ್ಪಡೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಜೊತೆ ಜಾಕಿಶ್ರಾಫ್ ಹಾಗೂ ಅರ್ಜುನ್ ರಾಂಪಾಲ್ ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಾ ಇದೆ.

ಇತ್ತೀಚೆಗಷ್ಟೆ ಸಂಗೀತ ನಿರ್ದೇಶಕರಾದ ಸಾಜಿದ್-ವಾಜಿದ್ ಕೂಡ ಕೇಸರಿಪಡೆಯನ್ನು ಸೇರಿದ್ದರು. ಫೆಬ್ರವರಿ ಹಾಗೂ ಮಾರ್ಚ್ ನಲ್ಲಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ಈ ಪೈಕಿ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆ ಅತ್ಯಂತ ನಿರ್ಣಾಯಕ ಎನಿಸಿದ್ದು, ರಾಜಕೀಯ ಪಕ್ಷಗಳು ಜನರನ್ನು ಸೆಳೆಯಲು ಬಾಲಿವುಡ್ ಸ್ಟಾರ್ ಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಮುಂದಾಗಿವೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...