alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ‘ಬಿಗ್ ಶಾಕ್’: ಚುನಾವಣೆ ಹೊಸ್ತಿಲಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಿದ ಸಂಸದೆ

ಮತ್ತೊಮ್ಮೆ ಅಧಿಕಾರಕ್ಕೆ ಬರಲು ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಆ ಪಕ್ಷದ ಸಂಸದೆ ಪಕ್ಷ ತೊರೆಯುವ ಮೂಲಕ ದೊಡ್ಡ ಶಾಕ್ ನೀಡಿದ್ದಾರೆ.

ಉತ್ತರ ಪ್ರದೇಶದ ಬಹರೈಚ್ ಕ್ಷೇತ್ರದ ಸಂಸದೆ ಸಾವಿತ್ರಿಬಾಯಿ ಫುಲೆ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಸಮಾಜವನ್ನು ಇಬ್ಬಾಗ ಮಾಡುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲಿನಿಂದಲೂ ಪಕ್ಷದ ಕೆಲವೊಂದು ತೀರ್ಮಾನಗಳಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆಯುವ ಮೂಲಕ ಕೇಂದ್ರ ನಾಯಕರಿಗೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ.

ಹನುಮಂತನನ್ನು ದಲಿತರಿಗೆ ಹೋಲಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ್ದ ಸಾವಿತ್ರಿಬಾಯಿ ಫುಲೆ, ದಲಿತನಾಗಿದ್ದ ಹನುಮಂತ, ಮನುವಾದಿಗಳ ಜೀತದಾಳಾಗಿದ್ದ ಎಂದು ಹೇಳಿಕೆ ನೀಡಿದ್ದರು. ಇದು ಬಿಜೆಪಿ ನಾಯಕರಿಗೆ ತೀವ್ರ ಇರಿಸುಮುರಿಸು ಉಂಟು ಮಾಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...