alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಮಾನವೀಯತೆ ಮರೆತ ಆಸ್ಪತ್ರೆ ಸಿಬ್ಬಂದಿ

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದ ಕಾರಣ, ಮಗನ‌ ಪ್ರಾಣ ಉಳಿಸಿಕೊಳ್ಳಲು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಮಗನನ್ನು ತಂದೆ ಕರೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಬಾಂದ ಜಿಲ್ಲೆಯಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನೊಬ್ಬನನ್ನು ಬಂದಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಪೋಷಕರಿಗೆ ವೈದ್ಯರು ಹೇಳಿದ್ದಾರೆ. ಆದರೆ ಆಂಬ್ಯುಲೆನ್ಸ್ ಒದಗಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಇದರೊಂದಿಗೆ 108 ಆಂಬ್ಯುಲೆನ್ಸ್ ಗೂ ಕರೆ ಮಾಡಿ ಒಂದು ಗಂಟೆ ಕಳೆದರೂ, ಬಾರದ ಹಿನ್ನೆಲೆಯಲ್ಲಿ ಅನಿರ್ವಾಯವಾಗಿ ಆಟೋ‌ ರಿಕ್ಷಾದಲ್ಲಿ‌ ಡ್ರಿಪ್ಸ್ ಹಾಕಿಕೊಂಡಿದ್ದ ಬಾಲಕನನ್ನು ಕರೆದುಕೊಂಡು ಹೋಗಿದ್ದೇವೆ ಎಂದು ಪೋಷಕರು ಹೇಳಿದ್ದಾರೆ.

ಆದರೆ ಮುಖ್ಯ ವೈದ್ಯಾಧಿಕಾರಿ ಡಾ.ಎಸ್. ಸುರೇಶ್, ಈ ರೀತಿ ಘಟನೆ ನಡೆದಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಬಂದಿದ್ದರೆ, ರೋಗಿಗೆ ಅಗತ್ಯ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದೆವು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...