alex Certify
ಕನ್ನಡ ದುನಿಯಾ       Mobile App
       

Kannada Duniya

ಮಗಳ ಸಾವಿನ ನೋವಿನಲ್ಲೂ ಅಪರಿಚಿತನನ್ನು ಬದುಕಿಸಲು ಧಾವಿಸಿದ ಪೇದೆ

ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರ ಕರ್ತವ್ಯ ನಿಷ್ಠೆಗೆ ಪ್ರತಿಯೊಬ್ಬರೂ ಸಲಾಂ ಹೇಳಲೇಬೇಕು. ಮಗಳ ಸಾವಿನ ನಡುವೆಯೂ ಅಪರಿಚಿತನ ಪ್ರಾಣ ಕಾಪಾಡಲು ಧಾವಿಸಿದ ಪೇದೆ ಬಗ್ಗೆ ಜಾಲತಾಣಗಳಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮುಖ್ಯಪೇದೆ ಭೂಪೇಂದ್ರ ತೋಮರ್ ಗೆ ಫೆಬ್ರವರಿ 23ರಂದು ಬೆಳಗ್ಗೆ 9 ಗಂಟೆ ವೇಳೆಗೆ ಕರೆ ಬಂದಿತ್ತು. ವ್ಯಕ್ತಿಯೊಬ್ಬ ಚಾಕು ಇರಿತಕ್ಕೊಳಗಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದಾನೆ ಅಂತಾ ಸಾರ್ವಜನಿಕರು ಮಾಹಿತಿ ನೀಡಿದ್ರು. ಅದೇ ಸಮಯಕ್ಕೆ ತೋಮರ್ ಗೆ ಮತ್ತೊಂದು ಫೋನ್ ಕಾಲ್ ಬಂದಿತ್ತು.

ಅದು ಮನೆಯಿಂದ, ತೋಮರ್ ಮಗಳು ಸ್ನಾನದ ಕೋಣೆಯಲ್ಲಿ ಬಿದ್ದು ಮೃತಪಟ್ಟಿರೋ ಶಾಕಿಂಗ್ ಸುದ್ದಿ ಅದು. ಇಂಥ ಸಂದರ್ಭದಲ್ಲಿ ಯಾರೇ ಆದ್ರೂ ಮಗಳ ಸಾವಿನ ಸುದ್ದಿ ಕೇಳಿ ಮನೆಗೆ ಧಾವಿಸ್ತಾರೆ. ಆದ್ರೆ ತೋಮರ್ ಮಾತ್ರ ದುಃಖದ ಸನ್ನಿವೇಶದಲ್ಲೂ ಕರ್ತವ್ಯವನ್ನು ಮರೆಯಲಿಲ್ಲ.

ಗಾಯಗೊಂಡು ರಸ್ತೆಯಲ್ಲಿ ಒದ್ದಾಡುತ್ತಿದ್ದವನನ್ನು ರಕ್ಷಿಸಲು ಸ್ಥಳಕ್ಕೆ ಧಾವಿಸಿದ್ರು. ಅವನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಅವನ ಪ್ರಾಣಕ್ಕೆ ಅಪಾಯವಿಲ್ಲ ಅನ್ನೋದು ಖಚಿತವಾದ ಮೇಲೆ ಮನೆಗೆ ತೆರಳಿದ್ರು.

ತೋಮರ್ ಮಗಳಿಗೆ 27 ವರ್ಷ ವಯಸ್ಸಾಗಿತ್ತು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಆಕೆ, ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ಲು. ಶೌಚಕ್ಕೆ ಹೋಗಿದ್ದಾಗ ಅಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಸತ್ತಿದ್ದು ಮಗಳೇ ಆದ್ರೂ, ಆ ಸಮಯದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಬದುಕಿಸುವುದೇ ತಮಗೆ ಮುಖ್ಯವಾಗಿತ್ತು ಅಂತಾ ತೋಮರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...