alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

up-grbini

ಲಖ್ನೋ: ಮಧ್ಯರಾತ್ರಿಯಲ್ಲೇ ಗರ್ಭಿಣಿಯನ್ನು ಆಸ್ಪತ್ರೆಯ ಸಿಬ್ಬಂದಿ ಹೊರ ಹಾಕಿದ್ದು, ಆಕೆ ಆಟೋದಲ್ಲಿ ತೆರಳುವಾಗ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಸಹರಾನ್ ಪುರದ ಮುನಾವರ್ ಎಂಬುವವರು ತಮ್ಮ ಗರ್ಭಿಣಿ ಪತ್ನಿಯನ್ನು ಹೆರಿಗೆ ನೋವಿನ ಕಾರಣದಿಂದ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ, ಆಕೆಗೆ ಚಿಕಿತ್ಸೆ ನೀಡಬೇಕಾದ ಆಸ್ಪತ್ರೆಯವರು ಹೊರ ಕಳಿಸಿದ್ದಾರೆ.

ಮಧ್ಯರಾತ್ರಿಯಲ್ಲೇ ಅನಿವಾರ್ಯವಾಗಿ ಮಹಿಳೆಯನ್ನು ಮತ್ತೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ, ಮಗುವನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ. ಮುನಾವರ್ ಜನಪುರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಸಹರಾನ್ ಪುರ(ಗ್ರಾಮೀಣ) ಎಸ್.ಪಿ. ವಿದ್ಯಾಸಾಗರ್ ಮಿಶ್ರಾ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...