alex Certify
ಕನ್ನಡ ದುನಿಯಾ       Mobile App
       

Kannada Duniya

ಗಿನ್ನಿಸ್ ದಾಖಲೆ ಮಾಡಿದ ಉತ್ತರ ಪ್ರದೇಶ ಸರ್ಕಾರ

uttar-pradesh-sets-world-for-planting-5-crore-trees-in-24-hoursಲಖನೌ: ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧಗಳಿಂದ ಸಿಎಂ ಅಖಿಲೇಶ್ ಯಾದವ್ ಅನೇಕರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಅವರ ಸರ್ಕಾರ ಪರಿಸರಕ್ಕೆ ಸಲ್ಲಿಸಿದ ಸೇವೆಯಿಂದ ಜನ ಅವರನ್ನು ಕೊಂಡಾಡುತ್ತಿದ್ದಾರೆ.

ಏಕೆಂದರೆ ಯುಪಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಸತತ 24 ಗಂಟೆಗಳ ಅವಧಿಯಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಯುಪಿಯ ಹೆಸರನ್ನು ಗಿನ್ನಿಸ್ ಪಟ್ಟಿಯಲ್ಲಿ ಬರೆದಿದ್ದಾರೆ. ಈಗಾಗಲೇ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ನ ಅಧಿಕಾರಿಗಳು ಅಖಿಲೇಶ್ ಯಾದವ್ ಅವರಿಗೆ ಗಿನ್ನಿಸ್ ಸರ್ಟಿಫಿಕೇಟ್ ಕೊಟ್ಟಿದ್ದಾರಂತೆ.

ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಒಂದು ದಿನದಲ್ಲಿ 22.5 ಲಕ್ಷ ಗಿಡಗಳನ್ನು ನೆಡಲಾಗಿದೆ. ಲಲಿತಪುರ, ಝಾನ್ಸಿ, ಅವಧ್ ಮತ್ತು ಶ್ರಾವಸ್ತಿಗಳಲ್ಲಿ ಕೂಡ ಲಕ್ಷಗಟ್ಟಲೆ ಸಸಿಗಳನ್ನು ನೆಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...