alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕೆ ಬಸ್ ಬಿದ್ದು 21 ಯಾತ್ರಿಕರು ಸಾವು

bus-ukand

ಡೆಹ್ರಾಡೂನ್: ಚಾರ್ ಧಾಮ್ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್, 250 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು, 21 ಮಂದಿ ಸಾವನ್ನಪ್ಪಿದ್ದಾರೆ.

ಉತ್ತರಾಖಂಡ್ ನ ಉತ್ತರಕಾಶಿಯ ಗಂಗೋತ್ರಿ ನಲಪಣಿ ಬಳಿ ಸಾಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಭಾಗೀರಥಿ ನದಿಗೆ ಬಿದ್ದಿದೆ.

ಬಸ್ ಬಿದ್ದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಐ.ಟಿ.ಬಿ.ಪಿ. ಯೋಧರು ಅಪಾಯಕ್ಕೆ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವ ಈ 8 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತರು ಮಧ್ಯಪ್ರದೇಶದ ಇಂದೋರ್ ಮೂಲದವರಾಗಿದ್ದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಮೃತರ ಕುಟುಂಬದವರಿಗೆ 2 ಲಕ್ಷ ರೂ., ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರಾಖಂಡ್ ಸರ್ಕಾರ ಕೂಡ ಪರಿಹಾರ ಘೋಷಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...