alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ‘ಕುದುರೆ ವ್ಯಾಪಾರ’ ದ ಸಿಡಿ

rawatಹರೀಶ್ ರಾವತ್ ನೇತೃತ್ವದ ಉತ್ತರಾಖಂಡ್ ಸರ್ಕಾರ, ಭಿನ್ನಮತೀಯ ಕಾಂಗ್ರೆಸ್ ಶಾಸಕರ ಬಂಡಾಯದ ಕಾರಣಕ್ಕಾಗಿ ಪತನಗೊಳ್ಳುವ ಹಾದಿಯಲ್ಲಿದ್ದು, ಈ ಮಧ್ಯೆ ಮುಖ್ಯಮಂತ್ರಿ ಹರೀಶ್ ರಾವತ್, ಶಾಸಕರನ್ನು ತಮ್ಮೆಡೆಗೆ ಸೆಳೆದುಕೊಳ್ಳಲು ‘ಕುದುರೆ ವ್ಯಾಪಾರ’ ನಡೆಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಖಾಸಗಿ ಸುದ್ದಿ ವಾಹಿನಿಯೊಂದು ನಡೆಸಿರುವ ಕುಟುಕು ಕಾರ್ಯಾಚರಣೆಯಲ್ಲಿ ಹರೀಶ್ ರಾವತ್, ಶಾಸಕರನ್ನು ಖರೀದಿಸುವ ಮಾತುಗಳನ್ನಾಡಿದ್ದಾರೆನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಹರೀಶ್ ರಾವತ್ ಈ ಆರೋಪ ತಳ್ಳಿ ಹಾಕಿದ್ದಾರಲ್ಲದೇ ಸಿಡಿಯನ್ನು ತಿರುಚಲಾಗಿದೆ ಎಂದಿದ್ದಾರೆ.

ಭಿನ್ನಮತೀಯ ಕಾಂಗ್ರೆಸ್ ಶಾಸಕರೊಂದಿಗೆ ಸೇರಿ ಸರ್ಕಾರ ರಚಿಸಲು ಬಿಜೆಪಿ ಉತ್ಸುಕವಾಗಿದ್ದು, ರಾಜ್ಯಪಾಲರು ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿದೆ. ಈ ಮಧ್ಯೆ ವಿಧಾನಸಭಾ ಸ್ಪೀಕರ್, ಭಿನ್ನಮತೀಯ ಕಾಂಗ್ರೆಸ್ ಶಾಸಕರಿಗೆ ನೋಟೀಸ್ ಜಾರಿ ಮಾಡಿದ್ದು, ಪಕ್ಷದ ವಿಪ್ ಉಲ್ಲಂಘನೆ ಮಾಡಿರುವುದಕ್ಕೆ ನಿಮ್ಮನ್ನು ಅಮಾನತುಗೊಳಿಸಬಾರದೇಕೆ ಎಂದು ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...