alex Certify
ಕನ್ನಡ ದುನಿಯಾ       Mobile App
       

Kannada Duniya

‘ಕೈ’ತಪ್ಪಿದ ಉತ್ತರಾಖಂಡ್: ಅರಳುತ್ತಾ ಕಮಲದ ಕನಸು.?

Harish-Rawat

ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ನಡುವೆಯೇ ಉತ್ತರಾಖಂಡದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿದ್ದು, ಆಡಳಿತಾರೂಢ ಕಾಂಗ್ರೆಸ್​ನ 12 ಶಾಸಕರು ಬಂಡಾಯವೆದ್ದಿರುವುದರಿಂದ ಕಾಂಗ್ರೆಸ್ ಸರ್ಕಾರ ಪತನವಾಗುವ ಎಲ್ಲ ಲಕ್ಷಣಗಳೂ ಕಂಡುಬಂದಿವೆ.

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಹಣಕಾಸು ಮಸೂದೆಯೊಂದಕ್ಕೆ ಒಪ್ಪಿಗೆ ಸೂಚಿಸುವ ಸಂದರ್ಭದಲ್ಲಿ ಕಾಂಗ್ರೆಸ್ ​ನ 12 ಶಾಸಕರು ಮತದಾನಕ್ಕೆ ನಿರಾಕರಿಸಿ ಹರೀಶ್ ರಾವತ್ ನೇತೃತ್ವದ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಇದೀಗ ಬಿಜೆಪಿ ಜತೆ ಸೇರಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ 36, ಪಿಡಿಎಫ್ ಮೈತ್ರಿಕೂಟ 6 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 28 ಶಾಸಕರನ್ನು ಹೊಂದಿದ್ದು, ಇದೀಗ ಕಾಂಗ್ರೆಸ್ ನ ಹನ್ನೆರಡು ಶಾಸಕರ ಬೆಂಬಲ ಪಡೆದಿರುವ ಬಿಜೆಪಿ, ರಾಜ್ಯಾಧ್ಯಕ್ಷ ಅಜಯ್ ಭಟ್ ಅವರೊಂದಿಗೆ ರಾಜ್ಯಪಾಲ ಕೆ.ಕೆ. ಪಾಲ್ ಅವರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಈ ಬೆಳವಣಿಗೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಬಿಜೆಪಿ ಸಹ ಮುಂದಾಗಿದ್ದು, ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ಗೆ ಎದುರಾಗಿರುವುದು ನಿಜಕ್ಕೂ ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...