alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಾಖಂಡ ಮೇಘಸ್ಪೋಟ: ಹಲವೆಡೆ ಭೂಕುಸಿತ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಸುತ್ತಮುತ್ತಲ ಪ್ರದೇಶದಲ್ಲಿ ಮೇಘಸ್ಪೋಟವಾಗಿದ್ದು, ಭಾರಿ ಮಳೆಯಾಗಿದೆ.  ಈ ನಡುವೆ ಚಮೋಲಿ ಅರಣ್ಯ ಪ್ರದೇಶದ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ.

ಸೋಮವಾರ ಮುಂಜಾನೆಯಿಂದ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅನೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮೇಘಸ್ಪೋಟದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅನೇಕ ಭಾಗಗಳಲ್ಲಿ ಮನೆ, ರಸ್ತೆಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.

ರಕ್ಷಣಾ ಪಡೆ, ವಿಪತ್ತು ನಿರ್ವಹಣಾ ತಂಡಗಳು ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅನೇಕ ಭಾಗದ ಜನರು ಆಶ್ರಯ ಕಳೆದುಕೊಂಡಿದ್ದಾರೆ. ಉತ್ತರಾಖಂಡದಲ್ಲಿ ಹರಿಯುವ ನದಿಗಳು ಈಗಾಗಲೇ ಅಪಾಯದ ಮಟ್ಟ ತಲುಪಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...