alex Certify
ಕನ್ನಡ ದುನಿಯಾ       Mobile App
       

Kannada Duniya

10ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ

ಸರ್ಕಾರಿ ನೌಕರಿ ಬಯಸುವವರಿಗೊಂದು ಖುಷಿ ಸುದ್ದಿ. ಪೋಸ್ಟಲ್ ಡಿಪಾರ್ಟ್ಮೆಂಟ್ ಬಂಪರ್ ಅವಕಾಶ ನೀಡ್ತಿದೆ. 5314 ಗ್ರಾಮೀಣ ಡಾಕಾ ಸೇವಕ್ ಹುದ್ದೆಗೆ ಅರ್ಜಿ ಕರೆದಿದೆ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 30,2017ರಿಂದಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರುವಾಗಿದ್ದು ನವೆಂಬರ್ 29 ಕೊನೆಯ ದಿನವಾಗಿದೆ.

10ನೇ ತರಗತಿಯಲ್ಲಿ ಅಭ್ಯರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. 18 ವರ್ಷದಿಂದ 40 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ ಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಮತ್ತು ಎನ್ ಸಿ ಎಲ್ ಅಭ್ಯರ್ಥಿಗಳಿಗೆ 3 ವರ್ಷ ರಿಯಾಯಿತಿ ನೀಡಲಾಗಿದೆ.

ಸಾಮಾನ್ಯ ವರ್ಗದವರು 100 ರೂಪಾಯಿ ಅರ್ಜಿ ಶುಲ್ಕ ತುಂಬಬೇಕು. ಎಸ್ ಸಿ, ಎಸ್ ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...