alex Certify
ಕನ್ನಡ ದುನಿಯಾ       Mobile App
       

Kannada Duniya

ಹರ್ಯಾಣ ಬಿಜೆಪಿ ಅಧ್ಯಕ್ಷನ ಮಗ ಅರೆಸ್ಟ್

v_1_1502268198_618x347

ಹರ್ಯಾಣ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲಾ ಮಗ ವಿಕಾಸ್ ಬರಾಲಾನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ವಿಕಾಸ್ ಬರಾಲಾ ಹಾಗೂ ಸ್ನೇಹಿತ ಆಶೀಶ್ ಕುಮಾರ್ ಗೆ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದ್ರೆ ಇಬ್ಬರೂ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ  ಚಂಡೀಗಢ ಪೊಲೀಸರು ವಿಕಾಸ್ ಬರಾಲಾ ಹಾಗೂ ಸ್ನೇಹಿತ ಆಶೀಶ್ ಕುಮಾರ್ ನನ್ನು  ಬಂಧಿಸಿದ್ದಾರೆ.

ಐಎಎಸ್ ಅಧಿಕಾರಿ ಮಗಳು ವರ್ಣಿಕಾ ಕುಂದು ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಕೇಸ್ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತನ ಮೇಲಿದೆ. ಪ್ರಕರಣ ನಡೆದ ನಂತ್ರ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ವಿಕಾಸ್ ಹಾಗೂ ಸ್ನೇಹಿತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ರಕ್ತ ಹಾಗೂ ಮೂತ್ರದ ಸ್ಯಾಂಪಲ್ ನೀಡುವಂತೆ ಹೇಳಿದ್ದರು. ಆದ್ರೆ ಇಬ್ಬರೂ ಒಪ್ಪಿಗೆ ನೀಡಿರಲಿಲ್ಲ. ಅಬ್ಸರ್ವೇಶನ್ ನಂತ್ರ ಇಬ್ಬರೂ ಮದ್ಯಪಾನ ಮಾಡಿದ್ದರು ಎಂದು ವೈದ್ಯರು ವರದಿ ನೀಡಿದ್ದರು.

ಪ್ರಕರಣವನ್ನು ಬಿಜೆಪಿ ಮುಚ್ಚಿ ಹಾಕುವ ಪ್ರಯತ್ನ ಮಾಡ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಆದ್ರೆ ಬಿಜೆಪಿ ಇದನ್ನು ನಿರಾಕರಿಸಿದೆ. ನಮ್ಮಿಂದ ಯಾವುದೇ ಒತ್ತಡವಿಲ್ಲವೆಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸಿಸಿ ಟಿವಿಯಲ್ಲಿ ಎಸ್ಯುವಿ ಕಾರನ್ನು ಇನ್ನೊಂದು ಕಾರು ಹಿಂಬಾಲಿಸುವುದು ಸ್ಪಷ್ಟವಾಗಿ ಕಾಣುತ್ತಿದೆ. ಆದ್ರೆ ಕಾರಿನಲ್ಲಿ ಕುಳಿತ ವ್ಯಕ್ತಿಗಳು ಹಾಗೂ ಕಾರಿನ ನಂಬರ್ ಸ್ಪಷ್ಟವಾಗಿಲ್ಲ. ಪೊಲೀಸರು ಐದು ಸಿಸಿ ಟಿವಿ ದೃಶ್ಯಗಳನ್ನು ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...