alex Certify
ಕನ್ನಡ ದುನಿಯಾ       Mobile App
       

Kannada Duniya

‘ವೆಂಕಯ್ಯ ಮತ್ತೊಮ್ಮೆ ಬೇಕಯ್ಯ’ ಎಂದ ಬಿಜೆಪಿ

Venkaiah-Naidu-2

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದಿಂದ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಲು ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವೆಂಕಯ್ಯ ನಾಯ್ಡು ಅವರು ಈಗಾಗಲೇ 3 ಸಲ ಕರ್ನಾಟಕದಿಂದ ಚುನಾಯಿತರಾಗಿದ್ದು. ಅವರಿಗೆ ಮತ್ತೊಮ್ಮೆ ಅವಕಾಶ ನೀಡಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ವೆಂಕಯ್ಯ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬಾರದೆಂದು ‘ವೆಂಕಯ್ಯ ಸಾಕಯ್ಯ’ ಅಭಿಯಾನ ನಡೆಸಲಾಗಿತ್ತು.

ಜಾಲತಾಣಗಳಲ್ಲಿ ‘ವೆಂಕಯ್ಯ, ಸಾಕಯ್ಯ’ ಆಂದೋಲನ ನಡೆದು, ಕರ್ನಾಟಕದಿಂದ 3 ಬಾರಿ ಆಯ್ಕೆಯಾಗಿರುವ ವೆಂಕಯ್ಯ ನಾಯ್ಡು ಅವರು ಕರ್ನಾಟಕಕ್ಕೆ ನೀಡಿರುವ ಕೊಡುಗೆಯಾದರೂ ಏನು ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಅವರ ಬದಲಿಗೆ ಕನ್ನಡಿಗರನ್ನೇ ರಾಜ್ಯಸಭೆಗೆ ಕಳಿಸಬೇಕೆಂದು ಅಭಿಪ್ರಾಯ ವ್ಯಕ್ತವಾಗಿತ್ತು.

ಇದೆಲ್ಲಾ ಬೆಳವಣಿಗೆ ನಂತರವೂ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವೆಂಕಯ್ಯ ಅವರಿಗೆ, ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಇದರೊಂದಿಗೆ ವಿಧಾನಪರಿಷತ್ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆದಿದೆ. ಸಭೆಯಲ್ಲಿ ಬಿಜೆಪಿ ನಾಯಕರಾದ ಯಡಿಯೂರಪ್ಪ, ಅನಂತಕುಮಾರ್, ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಭಾಗಿಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...