alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ‘ಶಾಕ್’ ಕೊಟ್ಟ ಹಿರಿಯ ನಾಯಕ

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸುತ್ತಿರುವಾಗಲೇ ಗುಜರಾತ್ ನ ಹಿರಿಯ ಕಾಂಗ್ರೆಸ್ ನಾಯಕ ಕುನ್ವರ್ಜಿ ಬವಲಿಯಾ, ಪಕ್ಷಕ್ಕೆ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ಕೊಟ್ಟಿದ್ದಾರೆ.

ಗುಜರಾತ್ ಕಾಂಗ್ರೆಸ್ ಘಟಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಬೆಳವಣಿಗೆಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಕುನ್ವರ್ಜಿ ಬವಲಿಯಾ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡರಾಗಿರುವ ಕುನ್ವರ್ಜಿ ಬವಲಿಯಾ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...