alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ತೊಗಾಡಿಯಾ

ನವದೆಹಲಿ: ಸೋಮವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಅಹಮದಾಬಾದ್ ಶಾಹಿಭಾಗ್ ಪ್ರದೇಶದಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಚಂದ್ರಮಣಿ ಆಸ್ಪತ್ರೆಗೆ ಸೇರಿಸಲಾಗಿದೆ.

62 ವರ್ಷದ ಪ್ರವೀಣ್ ತೊಗಾಡಿಯಾ ನಿನ್ನೆ ಬೆಳಿಗ್ಗೆಯಿಂದ ನಾಪತ್ತೆಯಾಗಿರುವ ಸುದ್ದಿ ಆತಂಕಕ್ಕೆ ಕಾರಣವಾಗಿತ್ತು. ಅವರು ಕಡಿಮೆ ರಕ್ತದ ಒತ್ತಡದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ತಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತಾದರೂ, ಅವರನ್ನು ಯಾರೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸರು ಹೇಳಿದ್ದರು.

ಪ್ರವೀಣ್ ತೊಗಾಡಿಯಾ ಅವರು ನಾಪತ್ತೆಯಾಗಿದ್ದು ಅವರನ್ನು ಹುಡುಕಿಕೊಡಬೇಕೆಂದು ಸಂಘಟನೆಗಳ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.

ನಂತರದಲ್ಲಿ ಪೊಲೀಸರು ಪ್ರವೀಣ್ ತೊಗಾಡಿಯಾ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...