alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲಕರಿಗೆ ಚೆಲ್ಲಾಟ- ಬಸ್ ಪ್ರಯಾಣಿಕರಿಗೆ ಪೀಕಲಾಟ

coimbatore-buses-racing-on-highwayಪ್ರಯಾಣಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಬಸ್ ಗೆ ಹತ್ತಿಸಿಕೊಳ್ಳುವ ಜಿದ್ದಿಗೆ ಬಿದ್ದ ಚಾಲಕರಿಬ್ಬರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಪೋಟಿಗೆ ಬಿದ್ದು ಬಸ್ ಚಾಲನೆ ಮಾಡಿದ್ದು, ಇದರಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಕೊಯಮತ್ತೂರು- ಪೊಲ್ಲಾಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಮೋಟಾರ್ ಸೈಕಲ್ ಸವಾರರೊಬ್ಬರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ ಈ ಬಸ್ ಚಾಲಕರ ಚಾಲನಾ ಪರವಾನಗಿ ಪತ್ರವನ್ನು ರದ್ದುಗೊಳಿಸಿದೆ.

ಮುಂದಿನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರನ್ನು ತಮ್ಮ ಬಸ್ ಗೆ ಹತ್ತಿಸಿಕೊಳ್ಳಬೇಕೆಂಬ ಜಿದ್ದಿಗೆ ಬಿದ್ದ ಈ ಬಸ್ ಚಾಲಕರುಗಳು ಯಮವೇಗದಲ್ಲಿ ಬಸ್ ಚಾಲನೆ ಮಾಡಿದ್ದಾರೆ. ಒಂದು ಬಸ್ ನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರಯಾಣಿಕರ ಪ್ರಾಣದ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕರುಗಳ ಬೇಜವಾಬ್ದಾರಿ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...