alex Certify
ಕನ್ನಡ ದುನಿಯಾ       Mobile App
       

Kannada Duniya

ಠಾಣೆಯಲ್ಲಿ ಇನ್ಸ್ ಪೆಕ್ಟರ್ ಗೆ ಮಸಾಜ್ ಮಾಡಿದ ಹೋಂಗಾರ್ಡ್

ಹೈದರಾಬಾದ್: ಹೈದರಾಬಾದ್ ನ ರಾಚಕೊಂಡ ಪೊಲೀಸ್ ಠಾಣೆಯಲ್ಲಿ ಮಸಾಜ್ ಮಾಡಿಸಿಕೊಂಡ ದೃಶ್ಯದ ವಿಡಿಯೊ ವೈರಲ್ ಆಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಪೊಲೀಸ್ ಇನ್ಸ್ ಪೆಕ್ಟರ್ ಕುರ್ಚಿಯಲ್ಲಿ ಟಿ.ವಿ. ನೋಡುತ್ತಾ ಕುಳಿತಿದ್ದು, ಹೋಂ ಗಾರ್ಡ್ ಸಿಬ್ಬಂದಿಯೊಬ್ಬರು ಮಸಾಜ್ ಮಾಡಿದ್ದಾರೆ. ಠಾಣೆಯಲ್ಲಿ ಇನ್ಸ್ ಪೆಕ್ಟರ್ ಮಸಾಜ್ ಮಾಡಿಸಿಕೊಂಡ ಈ ದೃಶ್ಯವನ್ನು ಅಲ್ಲಿದ್ದವರೊಬ್ಬರು ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ.

ದೃಶ್ಯದಲ್ಲಿ ವ್ಯಕ್ತಿಗಳ ಮುಖಗಳು ಸ್ಪಷ್ಟವಾಗಿ ಗೋಚರಿಸದಿದ್ದರೂ, ಸರೋನಗರ ಇನ್ಸ್ ಪೆಕ್ಟರ್ ಲಿಂಗಾಲಿಯಾ ಮತ್ತು ಹೋಂ ಗಾರ್ಡ್ ಸಿಬ್ಬಂದಿ ಸದಾನಾಯ್ಕ್ ಎಂದು ಗುರುತಿಸಲಾಗಿದೆ.

ಠಾಣೆಯಲ್ಲಿ ನಡೆದ ಈ ಘಟನೆ ಗಮನಕ್ಕೆ ಬರುತ್ತಲೇ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ವಿಡಿಯೊದಲ್ಲಿರುವುದು ತಾವಲ್ಲ ಎಂದು ಲಿಂಗಾಲಿಯಾ ಸ್ಪಷ್ಟಪಡಿಸಿದ್ದಾರೆ. ತನಿಖೆಯ ಬಳಿಕ ನಿಜಾಂಶ ಬಯಲಿಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...