alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರಿಗೆ ಅಧಿಕಾರಿ ಮೇಲೆ ಕೈಮಾಡಿದ ಬಿಜೆಪಿ ಮುಖಂಡ

ಲಾತೇಹಾರ್ ನಲ್ಲಿ ಜಿಲ್ಲಾ ಸಾರಿಗೆ ಅಧಿಕಾರಿ ಮೇಲೆ ಬಿಜೆಪಿ ಮುಖಂಡರೊಬ್ಬರು ದೌರ್ಜನ್ಯ ನಡೆಸಿದ್ದಾರೆ. ಹೆಸರು ಮತ್ತು ಹುದ್ದೆಯಿದ್ದ ನೇಮ್ ಪ್ಲೇಟ್ ಅನ್ನು ಕಾರಿನಿಂದ ತೆಗೆದು ಹಾಕಿದ್ದಕ್ಕೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕೃತ್ಯ ಎಸಗಿದ ರಾಜಧಾನಿ ಯಾದವ್, ಲಾತೇಹಾರ್ ನ ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ.

ಜಿಲ್ಲಾ ಸಾರಿಗೆ ಅಧಿಕಾರಿ ಎಫ್.ಬರ್ಲಾ ಕಾರಿನ ನೇಮ್ ಪ್ಲೇಟ್ ತೆಗೆದ ತಕ್ಷಣ ರೊಚ್ಚಿಗೆದ್ದ ಯಾದವ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡಿರುವ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಹಲ್ಲೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿ ಮೇಲೆ ಕೈಮಾಡಿದ ರಾಜಧಾನಿ ಯಾದವ್ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...