alex Certify
ಕನ್ನಡ ದುನಿಯಾ       Mobile App
       

Kannada Duniya

ಚೆಕ್ ಬೌನ್ಸ್ ಕೇಸ್ ನಲ್ಲಿ ಶಿಕ್ಷೆಗೊಳಗಾದ ಮಲ್ಯ

vijay-mallya_1254ಭಾರತದ ಬ್ಯಾಂಕುಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಅದನ್ನು ತೀರಿಸದೆ ಬ್ರಿಟನ್ ನಲ್ಲಿ ತಲೆಮರೆಸಿಕೊಂಡಿರುವ ‘ಮದ್ಯ ದೊರೆ’ ವಿಜಯ್ ಮಲ್ಯ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ.

ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದರ ಮಧ್ಯೆ ಹೈದರಾಬಾದ್ ಮೆಟ್ರೋಪಾಲಿಟನ್ ನ್ಯಾಯಾಲಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಮಲ್ಯ ಅವರಿಗೆ ಶಿಕ್ಷೆ ವಿಧಿಸಿದೆ.

ಜಿಎಂಆರ್ ಹೈದರಾಬಾದ್ ಇಂಟರ್ ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ತಮಗೆ ಬರಬೇಕಿರುವ 8 ಕೋಟಿ ರೂಪಾಯಿಗಳಿಗೆ ಸಂಬಂಧಪಟ್ಟಂತೆ ಒಟ್ಟು 11 ಪ್ರಕರಣ ದಾಖಲಿಸಿದ್ದು, ವಿಜಯ್ ಮಲ್ಯ ಅವರು ನೀಡಿದ್ದ 50 ಲಕ್ಷ ರೂ. ಚೆಕ್ ಬೌನ್ಸ್ ಆದ ಹಿನ್ನಲೆಯಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಮೇ 5 ರಂದು ಪ್ರಕಟಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...