alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ಘೋಷಿತ ಅಪರಾಧಿ ಎಂದ ಕೋರ್ಟ್

vijay-mallya-2

ಮುಂಬೈ: ವಿವಿಧ ಬ್ಯಾಂಕ್ ಗಳಿಗೆ ಸುಮಾರು 9000 ಕೋಟಿ ರೂ. ಸಾಲ ನೀಡಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ. ಲಂಡನ್ ನಲ್ಲಿರುವ ಮಲ್ಯ ವಿರುದ್ಧ ಕಾನೂನು ಕ್ರಮಕ್ಕೆ ಜಾರಿ ನಿರ್ದೇಶನಾಲಯ ಮುಂದಾಗಿದೆ.

ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿನಿರ್ದೇಶನಾಲಯ ಮುಂದಾಗುವ ಮೊದಲೇ ಮಲ್ಯ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದಾರೆ. ಈ ನಡುವೆ ಜಾರಿ ನಿರ್ದೇಶನಾಲಯ ವಿವಿಧ ಬ್ಯಾಂಕ್ ಗಳಿಗೆ ಸಾಲ ಪಡೆದು ವಂಚಿಸಿರುವ ಮಲ್ಯ ವಿರುದ್ಧ ಮುಂಬೈ ವಿಶೇಷ ಪಿ.ಎಂ.ಎಲ್.ಎ. ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸಿ ತೀರ್ಪು ನೀಡಿದೆ.

ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಗಳು ಜಾರಿಯಾಗಿವೆ. ಅವರನ್ನು ಕರೆತರಲು ಘೋಷಿತ ಅಪರಾಧಿ ಎಂದು ಘೋಷಿಸಬೇಕೆಂದು ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ನ್ಯಾಯಾಲಯ, ಅವರು ಘೋಷಿತ ಅಪರಾಧಿ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪನ್ನು ಲಂಡನ್ ಗೆ ಕಳುಹಿಸಿ ಅವರನ್ನು ಕರೆತರಲಾಗುವುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...