alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭೆ ಸದಸ್ಯತ್ವಕ್ಕೆ ವಿಜಯ್ ಮಲ್ಯ ರಾಜೀನಾಮೆ

Vijaymallya m2 m

ನವದೆಹಲಿ: ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 9000 ಕೋಟಿ ರೂ. ಸಾಲ ಮಾಡಿ, ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ರಾಜ್ಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಾಲದಿಂದಾಗಿ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಂಸದೀಯ ನೀತಿ ಸಮಿತಿ ಅವರ ಸದಸ್ಯತ್ವ ರದ್ದು ಮಾಡುವ ಕುರಿತಂತೆ ಶಿಫಾರಸು ಮಾಡಿದ್ದು, ಅವರನ್ನು ರಾಜ್ಯಸಭೆಯಿಂದ ಉಚ್ಛಾಟಿಸುವ ಸಾಧ್ಯತೆ ಇತ್ತು. ಈ ಬೆಳವಣಿಗೆ ಬೆನ್ನಲ್ಲೇ ಅವರು, ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಸದಸ್ಯತ್ವ ಅವಧಿ ಜೂನ್ 30ಕ್ಕೆ ಅಂತ್ಯಗೊಳ್ಳಬೇಕಿತ್ತು, ಎರಡು ತಿಂಗಳು ಮೊದಲೇ ಅವರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕದಿಂದ ವಿಜಯ್ ಮಲ್ಯ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಸಂಸದರ ವೇತನ, ಭತ್ಯೆಯನ್ನು ಅವರು ಒಂದಿಷ್ಟು ಬಿಡದೇ ಪಡೆದುಕೊಂಡಿದ್ದರು.

ದೇಶದ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 9000 ಕೋಟಿ ರೂ. ಸಾಲ ಮಾಡಿದ್ದು, ಅದನ್ನು ಪಾವತಿಸದೇ, ವಿದೇಶದಲ್ಲಿ ನೆಲೆಸಿರುವ ವಿಜಯ್ ಮಲ್ಯ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ಅನ್ನು ರದ್ದು ಮಾಡಲಾಗಿದೆ. ಅವರ ವಿರುದ್ಧ ಕ್ರಮಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...