alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ರಾಜೀನಾಮೆ ತಿರಸ್ಕೃತ

LONDON, ENGLAND - DECEMBER 12: Sahara Force India Team Principle Vijay Mallya welcomes Sergio Perez as their new driver on December 12, 2013 in London, England. (Photo by Scott Heavey/Getty Images)

ನವದೆಹಲಿ: ದೇಶದ ಹಲವಾರು ಬ್ಯಾಂಕ್ ಗಳಿಗೆ 9000 ಕೋಟಿ ರೂ. ಸಾಲ ತೀರಿಸಬೇಕಿರುವ ಉದ್ಯಮಿ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ. ಈ ನಡುವೆ ವಿಜಯ್ ಮಲ್ಯ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅದನ್ನು ತಿರಸ್ಕೃತಗೊಂಡಿದೆ.

ಇ ಮೇಲ್ ಮೂಲಕ ವಿಜಯ್ ಮಲ್ಯ ಅವರು ಸಲ್ಲಿಸಿದ್ದ ರಾಜೀನಾಮೆ ನಿಯಮಾನುಸಾರವಾಗಿಲ್ಲ ಎಂಬ ಕಾರಣಕ್ಕೆ ರಾಜೀನಾಮೆಯನ್ನು ತಿರಸ್ಕರಿಸಲಾಗಿದೆ. ಜೂನ್ 30ಕ್ಕೆ ವಿಜಯ್ ಮಲ್ಯ ಅವರ ರಾಜ್ಯಸಭೆ ಸದಸ್ಯತ್ವ ಅವಧಿ ಕೊನೆಗೊಳ್ಳಲಿದೆ. ಅವರನ್ನು ರಾಜ್ಯಸಭೆ ಸದಸ್ಯತ್ವ ಸ್ಥಾನದಿಂದ ವಜಾ ಮಾಡಲು ರಾಜ್ಯಸಭೆ ನೀತಿ ಸಮಿತಿ ತೀರ್ಮಾನಿಸಿದ್ದು, ಈಗಾಗಲೇ ಕ್ರಮಕೈಗೊಂಡಿದೆ ಎನ್ನಲಾಗಿದೆ. ಮಲ್ಯ ಅವರು ರಾಜೀನಾಮೆಯನ್ನು ಸಲ್ಲಿಸಿದ್ದರೂ, ಅದು ರಾಜೀನಾಮೆ ನಿಯಮಗಳಿಗೆ ಅನುಸಾರವಾಗಿ ಇರಲಿಲ್ಲ.

ಇದೇ ಕಾರಣಕ್ಕೆ ತಿರಸ್ಕರಿಸಲಾಗಿದೆ. ಮಲ್ಯ ದೇಶದ ವಿವಿಧ ಬ್ಯಾಂಕ್ ಗಳಿಂದ ಸುಮಾರು 9000 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಲಂಡನ್ ನಲ್ಲಿ ನೆಲೆಸಿದ್ದಾರೆ. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ಅನ್ನು ರದ್ದು ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...