alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ರೂಪಾನಿ ಸಿ.ಎಂ., ನಿತಿನ್ ಪಟೇಲ್ ಡಿ.ಸಿ.ಎಂ.

vijay-rupani-nitin-patel

ಅಹಮದಾಬಾದ್: ಪಟೇಲ್ ಮೀಸಲಾತಿ ಹೋರಾಟ, ದಲಿತ ಚಳವಳಿ ಮೊದಲಾದ ಕಾರಣಗಳಿಂದ ಗುಜರಾತ್ ನಲ್ಲಿ ಸಂಕಷ್ಟದಲ್ಲಿರುವ ಬಿ.ಜೆ.ಪಿ.ಗೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ವಯಸ್ಸಿನ ಕಾರಣ ನೀಡಿ, ಆನಂದಿಬೆನ್ ಪಟೇಲ್ ಅವರು ರಾಜೀನಾಮೆ ನೀಡಿದ ನಂತರ, ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕುತೂಹಲ ಸಹಜವಾಗಿಯೇ ಇತ್ತು. ಇದೀಗ ನಿರೀಕ್ಷೆಯಂತೆಯೇ ಗುಜರಾತ್ ಮುಖ್ಯಮಂತ್ರಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ವಿಜಯ್ ರೂಪಾನಿ ಹಾಗೂ ಉಪಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಅವರನ್ನು ಆಯ್ಕೆಮಾಡಲಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ನಾಯಕರಾಗಿ ವಿಜಯ್ ರೂಪಾನಿ ಅವರನ್ನು ಆಯ್ಕೆಮಾಡಲಾಗಿದೆ.

ರಾಜ್ ಕೋಟ್ ಪೂರ್ವ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಜಯ್ ರೂಪಾನಿ ಅವರು ಆನಂದಿಬೆನ್ ಸಂಪುಟದಲ್ಲಿ ಸಾರಿಗೆ, ನೀರಾವರಿ ಹಾಗೂ ಕಾರ್ಮಿಕ ಖಾತೆ ಸಚಿವರಾಗಿದ್ದರು. ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರ ಆಪ್ತರಾಗಿರುವ ರೂಪಾನಿ ಇದೀಗ ಗುಜರಾತ್ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ. ಈ ಮೊದಲು ನಿತಿನ್ ಪಟೇಲ್ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತಾದರೂ, ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...