alex Certify
ಕನ್ನಡ ದುನಿಯಾ       Mobile App
       

Kannada Duniya

ಅಡ್ವಾಣಿ ಹುಟ್ಟುಹಬ್ಬದಂದು ವಿಜಯ್ ರೂಪಾನಿ ಪ್ರಮಾಣ

ಗಾಂಧಿನಗರ: ಗುಜರಾತ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಆಯ್ಕೆ ಮಾಡಲಾಗಿದೆ.

ವಿಜಯ್ ರೂಪಾನಿ ಮುಖ್ಯಮಂತ್ರಿಯಾಗಿ, ನಿತಿನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಡಿಸೆಂಬರ್ 25 ರಂದು ವಿಜಯ್ ರೂಪಾನಿ 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿ.ಜೆ.ಪಿ. ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಹುಟ್ಟುಹಬ್ಬದ ದಿನದಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಕಳೆದ 22 ವರ್ಷಗಳಿಂದ ಗುಜರಾತ್ ನಲ್ಲಿ ಅಧಿಕಾರದಲ್ಲಿರುವ ಬಿ.ಜೆ.ಪಿ. ಮತ್ತೆ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಬೇರೆಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತಾದರೂ, ಬಿ.ಜೆ.ಪಿ. ವರಿಷ್ಠರು ನಾಯಕತ್ವ ಬದಲಾವಣೆಗೆ ಮುಂದಾಗಿಲ್ಲ.

ವಿಜಯ್ ರೂಪಾನಿ ಹಾಗೂ ನಿತಿನ್ ಪಟೇಲ್ ಅವರನ್ನು ಮುಂದುವರೆಸಲು ವರಿಷ್ಠರು ತೀರ್ಮಾನಿಸಿದ್ದಾರೆ. ಮತ್ತೊಬ್ಬರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ನಿಯೋಜಿಸಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...