alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳು ಫೇಲಾಗಿದ್ದಕ್ಕೆ ಶಾಲೆಯನ್ನೇ ಬಂದ್ ಮಾಡಿದ ಪೋಷಕರು…!

ಹತ್ತನೇ ತರಗತಿಯ ಸಿಬಿಎಸ್ಇ ಪರೀಕ್ಷೆಯಲ್ಲಿ ತಮ್ಮ ಮಕ್ಕಳು ಫೇಲ್ ಆಗಿದ್ದಾರೆಂಬ ಆಕ್ರೋಶದಿಂದ ಪೋಷಕರು ಶಾಲೆಗೇ ಬೀಗ ಹಾಕಿರುವ ಘಟನೆ ಹರಿಯಾಣದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ.

ಪಲ್ವಾಲ್ ಜಿಲ್ಲೆಯ ದಿಗೋತ್ ಸೀನಿಯರ್ ಸೆಕೆಂಡರಿ ಸ್ಕೂಲ್ ನ ಎಲ್ಲಾ 51 ಮಕ್ಕಳು ಈ ಬಾರಿಯ ಸಿಬಿಎಸ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ.

ಮಕ್ಕಳು ಪರೀಕ್ಷೆಯಲ್ಲಿ ಫೇಲ್ ಆಗಲು ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡದಿರುವುದೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಶಾಲೆಗೆ ಬೀಗ ಜಡಿದಿದ್ದಾರೆ.

ಹಿಂದೆಯೇ ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಅವರು ಸ್ಪಂದಿಸದ ಕಾರಣ ತಮ್ಮ ಮಕ್ಕಳು ಸಿಬಿಎಸ್ಇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎಂಬುದು ಪೋಷಕರ ಆರೋಪವಾಗಿದೆ.

ಇದೀಗ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಒಂದೇ ಶಾಲೆಯ ಎಲ್ಲ ಮಕ್ಕಳು ಫೇಲ್ ಆಗಲು ಕಾರಣವೇನೆಂಬುದನ್ನು ಪರಿಶೀಲಿಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...