alex Certify
ಕನ್ನಡ ದುನಿಯಾ       Mobile App
       

Kannada Duniya

ಆರಂಭವಾಯ್ತು ಕೊನೆಯ ಹಂತದ ಮತದಾನ

vite-up

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ, 7 ನೇ ಹಾಗೂ ಕೊನೆಯ ಹಂತದ ಮತದಾನ ಆರಂಭವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಸೇರಿದಂತೆ 7 ಜಿಲ್ಲೆಗಳ 40 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 535 ಅಭ್ಯರ್ಥಿಗಳು ಕಣದಲ್ಲಿದ್ದು, 1.41 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

14,458 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಬಿಗಿಭದ್ರತೆ ಒದಗಿಸಲಾಗಿದೆ.

ಮಣಿಪುರದಲ್ಲಿ 22 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, 98 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 7.83 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 1151 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇಂದು ಕೊನೆಯ ಹಂತದ ಮತದಾನ ಮುಗಿದಲ್ಲಿ, ಪಂಚ ರಾಜ್ಯಗಳ ಚುನಾವಣೆಗೆ ತೆರೆ ಬೀಳಲಿದ್ದು, ಮಾರ್ಚ್ 11 ರಂದು ಫಲಿತಾಂಶ ಪ್ರಕಟವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...