alex Certify
ಕನ್ನಡ ದುನಿಯಾ       Mobile App
       

Kannada Duniya

‘ವಾರ್ಧಾ’ ಅಬ್ಬರಕ್ಕೆ ತತ್ತರಿಸಿದ ಚೆನ್ನೈ

che-vard

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ, ‘ವಾರ್ಧಾ’ ಚಂಡಮಾರುತದ ಅಬ್ಬರಕ್ಕೆ ಚೆನ್ನೈ ಮಹಾನಗರ ತತ್ತರಿಸಿದೆ.

ಭಾರೀ ವೇಗದಲ್ಲಿ ಬೀಸಿದ ಬಿರುಗಾಳಿ ಸಹಿತ ಮಳೆಗೆ 4000 ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. 500 ಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಭಾರೀ ಗಾಳಿ ಮಳೆಗೆ ರಾಜಭವನಕ್ಕೂ ನೀರು ನುಗ್ಗಿದೆ. ಆಳ್ವಾರ್ ಪೇಟ್, ಪೋಯಸ್ ಗಾರ್ಡನ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಉತ್ತರ ಚೆನ್ನೈನಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಅನೇಕ ಮನೆಗಳ ಛಾವಣಿ ಹಾರಿಹೋಗಿವೆ. ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರೊಂದು ಬಿರುಗಾಳಿಗೆ ಉರುಳಿ ಬಿದ್ದ ದೃಶ್ಯ ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಿರುಗಾಳಿ ಸಹಿತ ಚೆನ್ನೈ ತೀರಕ್ಕೆ ಅಪ್ಪಳಿಸಿದ ಚಂಡಮಾರುತದ ವೇಗ ಕಡಿಮೆಯಾಗಿ ಆಂಧ್ರ ಕರಾವಳಿಯತ್ತ ಸಾಗಿದೆ. ಪರಿಸ್ಥಿತಿ ಎದುರಿಸಲು ನೌಕಾಸೇನೆ ಸನ್ನದ್ಧವಾಗಿದೆ. ಕೆಲವೆಡೆ ಸೇನೆಯಿಂದ ರಕ್ಷಣಾ ಕಾರ್ಯ ಆರಂಭಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...