alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್

mallyaa vijay 13

ಹೈದರಾಬಾದ್: ವಿವಿಧ ಬ್ಯಾಂಕ್ ಗಳಿಂದ ಸುಮಾರು 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಿದೆ. ಏಪ್ರಿಲ್ 13 ರೊಳಗೆ ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿದೆ.

ವಿಜಯ್ ಮಲ್ಯ ಅವರು ಐಡಿಬಿಐ ಬ್ಯಾಂಕ್ ನಲ್ಲಿ ಸಾಲ ಪಡೆದು ವಂಚಿಸಿದ ಹಾಗೂ ವಿದೇಶಿ ವಿನಿಮಯ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ವಿಜಯ್ ಮಲ್ಯ ಹಾಗೂ ಕಿಂಗ್ ಫಿಷರ್ ಮುಖ್ಯ ಹಣಕಾಸು ಅಧಿಕಾರಿ ಎ. ರಘುನಾಥನ್ ಅವರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಿದೆ. ಹೈದರಾಬಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಹಾಜರಾಗಲು ಸೂಚಿಸಿತ್ತೆನ್ನಲಾಗಿದೆ.

ಸಾಲದ ಸುಳಿಗೆ ಸಿಲುಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಜಯ್ ಮಲ್ಯ ಈಗಾಗಲೇ ಲಂಡನ್ ನಲ್ಲಿದ್ದಾರೆ. ಇತ್ತ ಅವರಿಗೆ ಸಾಲ ಕೊಟ್ಟಿದ್ದ ಬ್ಯಾಂಕ್ ಗಳು ನ್ಯಾಯಾಲಯದ ಮೊರೆ ಹೋಗಿವೆ. ರಾಜ್ಯಸಭೆಯಲ್ಲಿಯೂ ಮಲ್ಯ ವಿಚಾರ ಚರ್ಚೆಯಾಗಿದೆ. ಇದೀಗ ಹೈದರಾಬಾದ್ ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...