alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಾ ಸಾವಿನ ರಹಸ್ಯ ತಿಳಿಯಲು ತನಿಖಾ ಆಯೋಗ

jaya-dd

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು ಕೊಲ್ಲಲ್ಪಟ್ಟಿದ್ದರೆ, ಇದರಲ್ಲಿ ಶಶಿಕಲಾ ಭಾಗಿಯಾಗಿದ್ದಾರೆಯೇ ಎಂಬುದನ್ನು ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.

ಎ.ಐ.ಎ.ಡಿ.ಎಂ.ಕೆ. ಪನ್ನೀರ್ ಸೆಲ್ವಂ ಬಣ ವಿಲೀನಕ್ಕೆ ಮೊದಲು ಇಟ್ಟಿದ್ದ ಬೇಡಿಕೆಯಂತೆ ಹಾಗೂ ಸಾರ್ವಜನಿಕರ ಒತ್ತಾಸೆಯಂತೆ ಆಯೋಗವನ್ನು ರಚಿಸಲಾಗಿದೆ.

ಅಮ್ಮನ ಸಾವಿನ ಕುರಿತಾಗಿ ಭಾರೀ ಅನುಮಾನ ವ್ಯಕ್ತವಾಗಿತ್ತು. ಸಾರ್ವಜನಿಕರಿಂದ ಭಾರೀ ಒತ್ತಡ ಕೇಳಿ ಬಂದ ಹಿನ್ನಲೆಯಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಅಲ್ಲದೇ, ಅಮ್ಮನವರ ಪೋಯಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿಸಲಾಗುವುದು ಎಂದು ಪಳಸ್ವಾಮಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿ ಸುದೀರ್ಘ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸಾವನ್ನಪ್ಪಿದ್ದರು. ಅವರ ಸಾವಿನ ಕುರಿತಾಗಿ ಭಾರೀ ಅನುಮಾನ ವ್ಯಕ್ತವಾಗಿತ್ತು.

ನಂತರದಲ್ಲಿ ಪಕ್ಷದಲ್ಲಿ ಹಲವು ಬೆಳವಣಿಗೆ ನಡೆದು, ಮುಖ್ಯಮಂತ್ರಿಯಾಗಿದ್ದ ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಹುದ್ದೆಗೇರಬೇಕಿದ್ದ ಶಶಿಕಲಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಪಳನಿಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ.

ಶಶಿಕಲಾ ಸಂಬಂಧಿ ಟಿ.ಟಿ.ವಿ. ದಿನಕರನ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ. ಈ ಮಧ್ಯೆ ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ಬಣಗಳ ವಿಲೀನಕ್ಕೆ ಮಾತುಕತೆ ನಡೆದಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...