alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನಲ್ಲಿ 3 ಅಂತಸ್ತಿನ ಕಟ್ಟಡವೊಂದು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿದ್ದು, ಈ ದೃಶ್ಯದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗುಂಟೂರಿನ ನಂದಿವೇಲಗು ರಸ್ತೆಯಲ್ಲಿನ ಈ ಕಟ್ಟಡ ನಾರಾಯಣಮೂರ್ತಿ ಎಂಬುವವರಿಗೆ ಸೇರಿದ್ದಾಗಿದ್ದು, ಇಲ್ಲಿ ಚರಂಡಿ ಕಾಮಗಾರಿಯನ್ನು ಸ್ಥಳೀಯ ಆಡಳಿತ ಕೈಗೊಂಡಿತ್ತು. ಕಟ್ಟಡ ಶಿಥಿಲಾವಸ್ಥೆಗೆ ತಲುಪಿರುವುದನ್ನು ಗುರುತಿಸಿ ತೆರವುಗೊಳಿಸುವಂತೆ ಸ್ಥಳೀಯ ಆಡಳಿತದ ಅಧಿಕಾರಿಗಳು ಸೂಚನೆ ನೀಡಿದ್ದರೂ, ತೆರವುಗೊಳಿಸಿರಲಿಲ್ಲ.

ಕಟ್ಟಡದಲ್ಲಿದ್ದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಶಿಥಿಲಾವಸ್ಥೆಯ ಈ ಕಟ್ಟಡ ನೋಡನೋಡುತ್ತಿದ್ದಂತೆಯೇ ಕುಸಿದುಬಿದ್ದಿದೆ. ಕೆಲವೇ ಕ್ಷಣದಲ್ಲಿ ಕಟ್ಟಡ ಕುಸಿಯುವ ದೃಶ್ಯವನ್ನು ಅಲ್ಲಿದ್ದವರು ಸೆರೆ ಹಿಡಿದು ಜಾಲತಾಣದಲ್ಲಿ ಹಾಕಿದ್ದು, ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...