alex Certify
ಕನ್ನಡ ದುನಿಯಾ       Mobile App
       

Kannada Duniya

ಗನ್ ಪಾಯಿಂಟ್ ನಲ್ಲಿ ಚಿಕಿತ್ಸೆಗೆ ಒತ್ತಡ

ಗಾಯಗೊಂಡಿದ್ದ ಸ್ನೇಹಿತನಿಗೆ ತಕ್ಷಣಕ್ಕೆ ಚಿಕಿತ್ಸೆ ನೀಡುವಂತೆ, ದುಷ್ಕರ್ಮಿಗಳ ಗುಂಪು ವೈದ್ಯರಿಗೆ ಗನ್ ತೋರಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಹೂಗ್ಲಿ ಜಿಲ್ಲೆಯ ಶ್ರೀರಾಂಪುರ್ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂಗೆ ಬಂದಿದ್ದ ದುಷ್ಕರ್ಮಿಗಳು, ಗಾಯಗೊಂಡಿದ್ದ ಯುವಕನೊಬ್ಬನಿಗೆ ಚಿಕಿತ್ಸೆ ನೀಡಲು ಒತ್ತಾಯಿಸಿದ್ದಾರೆ.

ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ, ಪ್ರವೇಶ ಅರ್ಜಿ ಭರ್ತಿ ಮಾಡಿ ಸಹಿ ಹಾಕಲು ಸೂಚಿಸಿದ್ದು, ಇದಕ್ಕೆ ನಿರಾಕರಿಸಿದ ಗ್ಯಾಂಗ್, ಹಲ್ಲೆ ನಡೆಸಿದೆ.

ಗನ್ ತೋರಿಸಿ ಬೆದರಿಸಿದ್ದಲ್ಲದೇ ತಕ್ಷಣವೇ ಚಿಕಿತ್ಸೆ ನೀಡಲು ಬಲವಂತ ಮಾಡಿದ್ದಾರೆ. ಪೊಲೀಸರಿಗೆ ಕರೆ ಮಾಡಲು ಮುಂದಾಗುತ್ತಿದ್ದಂತೆ, ಗಾಯಾಳುವನ್ನು ಕರೆದುಕೊಂಡು ಪರಾರಿಯಾಗಿದ್ದಾರೆ.

ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಸಿ.ಸಿ. ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡ ಯುವಕನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆತರಲಾಗಿತ್ತು. ಸಿ.ಸಿ. ಕ್ಯಾಮೆರಾ ದೃಶ್ಯಗಳನ್ನಾಧರಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...