alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಕನ ಬಂಧನಕ್ಕೆ ಕಾರಣವಾಯ್ತು ಫೇಸ್ ಬುಕ್ ಕಮೆಂಟ್

facebook2

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಪಕ್ಷದ ಕೌನ್ಸಿಲರ್ ಒಬ್ಬರ ವಿರುದ್ದ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಕಮೆಂಟ್ ಮಾಡಿದ್ದ ಯುವಕನೊಬ್ಬನ ವಿರುದ್ದ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿರುವ ಪ್ರಕರಣ ಪಶ್ಚಿಮ ಬಂಗಾಳದ ಜಲಪೈಗುರಿಯಲ್ಲಿ ನಡೆದಿದೆ.

ಟಿಎಂಸಿ ಕೌನ್ಸಿಲರ್ ಪುಲಿನ್ ಗೋಲ್ದಾರ್, ಸಮಾಜಘಾತುಕ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ರೋಹಿತ್ ಪಾಶಿ ಎಂಬ ಯುವಕ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದರ ವಿರುದ್ದ ಪುಲಿನ್ ಗೋಲ್ದಾರ್, ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೋಹಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದಿದ್ದು, ಪ್ರತಿ ಪಕ್ಷ ಸಿಪಿಐ(ಎಂ), ಸತ್ಯ ಹೇಳುವವರ ಧ್ವನಿಯನ್ನು ತೃಣಮೂಲ ಕಾಂಗ್ರೆಸ್ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದೆ. ಇದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರರು ಹೇಳಿಕೆ ನೀಡಿದ್ದು, ಪೊಲೀಸರು ತಮ್ಮಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ರೀತ್ಯಾ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...