alex Certify
ಕನ್ನಡ ದುನಿಯಾ       Mobile App
       

Kannada Duniya

BJP ಸಂಸದನಿಗೆ ಬಾಸುಂಡೆ

bjp-mp-basunde

ಕೋಲ್ಕತ್ತಾ: ಬಿ.ಜೆ.ಪಿ. ಸಂಸದನ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಾಸುಂಡೆ ಬರುವಂತೆ ಹಲ್ಲೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ನಡೆದಿದೆ.

ಬಿ.ಜೆ.ಪಿ. ಸಂಸದ ಜಾರ್ಜ್ ಬೇಕರ್ಸ್ ಹಲ್ಲೆಗೊಳಗಾದವರು. ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಜಾರ್ಜ್ ಬುರ್ದ್ವಾನ್ ಗೆ ಆಗಮಿಸಿದ್ದ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ, ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಜಾರ್ಜ್ ಅವರ ಬೆನ್ನ ಮೇಲೆ ಬಾಸುಂಡೆ ಮೂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಜಾರ್ಜ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಹಲ್ಲೆ ನಡೆಸಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...