alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ರಾಜ್ಯದಲ್ಲಿ ಇಳಿಕೆಯಾಯಿತು ಪೆಟ್ರೋಲ್-ಡೀಸೆಲ್ ಬೆಲೆ

ನಿರಂತರವಾಗಿ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯನ್ನು ನಿಯಂತ್ರಣಕ್ಕೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸೋಮವಾರದಂದು ‘ಭಾರತ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಭಾರತ್ ಬಂದ್’ ಗೂ ಮುನ್ನವೇ ಬಿಜೆಪಿ ನೇತೃತ್ವದ ರಾಜಸ್ಥಾನ ಸರ್ಕಾರ, ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಶೇಕಡ 4 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಈ ರಾಜ್ಯದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಕೊಂಚ ಮಟ್ಟಿಗೆ ಇಳಿಕೆಯಾಗಿದೆ.

ಇದಾದ ಬಳಿಕ ಆಂಧ್ರಪ್ರದೇಶ ಸರ್ಕಾರವೂ ತೆರಿಗೆಯನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಕರ್ನಾಟಕ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವ ಕುರಿತು ಒತ್ತಡ ಹೆಚ್ಚಾಗಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಒಂದು ರೂ.ಗಳಷ್ಟು ಇಳಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ಸಂತಸ ಮೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...