alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರದ ಬೇಡಿಕೆ ನಿರಾಕರಿಸಿದ ವಾಟ್ಸಾಪ್

ವಾಟ್ಸಾಪ್ ತನ್ನ ಪ್ಲಾಟ್ಫಾರ್ಮ್ ನಲ್ಲಿ ಸಂದೇಶ ರವಾನೆಯ ಮೂಲವನ್ನು ಪತ್ತೆ ಹಚ್ಚುವ ಸಾಫ್ಟ್ವೇರ್ ಅಭಿವೃದ್ಧಿಪಡಿಸಲು ನಿರಾಕರಿಸಿದೆ. ಸರ್ಕಾರ ಈ ರೀತಿಯ ಸಾಫ್ಟ್ವೇರ್ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿತ್ತು. ಆದ್ರೆ ವಾಟ್ಸಾಪ್ ಸರ್ಕಾರದ ಬೇಡಿಕೆಯನ್ನು ತಿರಸ್ಕರಿಸಿದೆ.

ದೇಶದಲ್ಲಿ ಸಾಮಾಜಿಕ ಜಾಲತಾಣ ವಾಟ್ಸಾಪ್ ಮೂಲಕ ಅನೇಕ ಸುಳ್ಳು ಸುದ್ದಿಗಳು ರವಾನೆಯಾಗ್ತಿವೆ. ಈ ವದಂತಿಯಿಂದಾಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲ ಗುಂಪುಗಳ ಸದಸ್ಯರು ಗಾಯಗೊಂಡಿದ್ದಾರೆ. ಇದ್ರ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರ್ಕಾರ, ವಾಟ್ಸಾಪ್ ಗೆ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿತ್ತು.

ಸಂದೇಶ ರವಾನೆ ಮಾಡುವ ಮೂಲ ಯಾವುದು ಎಂಬ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಇದು ವಾಟ್ಸಾಪ್ ಗೌಪ್ಯತೆ ಮೇಲೆ ದುಷ್ಟಪರಿಣಾಮ ಬೀರಲಿದೆ. ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ವಾಟ್ಸಾಪ್ ನಲ್ಲಿ ಬ್ಯಾಂಕ್ ಖಾತೆ ಸೇರಿದಂತೆ ವೈಯಕ್ತಿಕ ವಿಚಾರಗಳನ್ನು ಜನರು ಯಾವುದೇ ಆತಂಕವಿಲ್ಲದೆ ರವಾನೆ ಮಾಡ್ತಿದ್ದಾರೆ. ಹೊಸ ತಂತ್ರಜ್ಞಾನ ಈ ಗೌಪ್ಯತೆಗೆ ಅಡ್ಡಿಯಾಗಲಿದೆ ಎಂದು ವಾಟ್ಸಾಪ್ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...