alex Certify
ಕನ್ನಡ ದುನಿಯಾ       Mobile App
       

Kannada Duniya

ಸುಳ್ಳು ಸುದ್ದಿ ತಡೆಯಲು ರೇಡಿಯೋ ಮೊರೆ ಹೋದ ವಾಟ್ಸಾಪ್

ವಾಟ್ಸಾಪ್, ಸುಳ್ಳು ಸುದ್ದಿ ಕಡಿವಾಣಕ್ಕೆ ಹೊಸ ತಂತ್ರವನ್ನು ಬಳಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದ್ದು, ಆಲ್ ಇಂಡಿಯಾ ರೇಡಿಯೋ ಮೂಲಕ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದೆ.

ವಾಟ್ಸಾಪ್ ಸುಳ್ಳು ಸುದ್ದಿ ತಡೆಯಲು ಕ್ಯಾಂಪೇನ್ ನಡೆಸಲು ಮುಂದಾಗಿದೆ. ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಸೇರಿದಂತೆ ಹಲವು ರಾಜ್ಯಗಳ ಬಳಕೆದಾರರಲ್ಲಿ ಜಾಗೃತಿ ಮೂಡಿಸಲಿದೆ. 46 ರೇಡಿಯೋ ಸ್ಟೇಷನ್ ಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲು ವಾಟ್ಸಾಪ್ ಮುಂದಾಗಿದೆ. ಕೆಲವೇ ದಿನಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಅಭಿಯಾನ ಶುರು ಮಾಡಲು ಸಿದ್ಧತೆ ನಡೆಸಿದೆ.

ರೇಡಿಯೋದಲ್ಲಿ ಬಿತ್ತರವಾಗುವ ಮಾಹಿತಿಯಲ್ಲಿ ಕಂಪನಿ, ಬಳಕೆದಾರರು ತಮಗೆ ಬಂದ ಸಂದೇಶವನ್ನು ಇನ್ನೊಬ್ಬರಿಗೆ ಕಳುಹಿಸುವ ಮುನ್ನ ಸತ್ಯಾಸತ್ಯತೆ ಅರಿಯುವಂತೆ ತಿಳಿಸಿದೆ. ಸುಳ್ಳು ಸುದ್ದಿ ಕಂಡು ಬಂದಲ್ಲಿ ದೂರು ನೀಡುವಂತೆ ತಿಳಿಸಲಾಗುತ್ತಿದೆ. ಸುಳ್ಳು ಸುದ್ದಿಗಳನ್ನು ಫಾರ್ವರ್ಡ್ ಮಾಡದಂತೆ ಜನರಲ್ಲಿ ಎಚ್ಚರಿಕೆ ಮೂಡಿಸುವ ಕೆಲಸಕ್ಕೆ ವಾಟ್ಸಾಪ್ ಸಂಸ್ಥೆ ಮುಂದಾಗಿದೆ.

ಇತ್ತೀಚೆಗೆ ದೇಶದಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಗಳಿಂದ ಹತ್ತಾರು ಅಮಾಯಕರು ಸಾವನ್ನಪ್ಪಿದ್ದರು. ಅಲ್ಲದೇ ದೇಶಾದ್ಯಂತ ಕಲ್ಲು ತೂರಾಟ, ಗುಂಪು ಘರ್ಷಣೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸಂದೇಶಗಳೇ ಪ್ರಮುಖ ಕಾರಣ ಎಂದು ಕೇಂದ್ರ ಸರ್ಕಾರ ಗಂಭೀರ ಆರೋಪ ಮಾಡಿತ್ತು. ಜುಲೈ 10ರಿಂದ ಫಾರ್ವರ್ಡ್ ಮೆಸೇಜ್ ಗಳಿಗೆ ಫಾರ್ವರ್ಡ್ ಲೇಬಲ್ ವ್ಯವಸ್ಥೆಯನ್ನು ವಾಟ್ಸಾಪ್ ಅಳವಡಿಸಿತ್ತು. ಆ ಮೂಲಕ ಸುಳ್ಳು ಸುದ್ದಿಗಳನ್ನು ಕಂಡುಹಿಡಿಯುವುದಕ್ಕೆ ಆಯ್ಕೆಯನ್ನು ಕಲ್ಪಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...