alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಲು ಖುದ್ದು ರಸ್ತೆಗಿಳಿದ ನ್ಯಾಯಮೂರ್ತಿ

ಹಿಮಾಚಲ ಪ್ರದೇಶದಲ್ಲೊಂದು ಅಪರೂಪದ ಘಟನೆ ನಡೆದಿದೆ. ಶಿಮ್ಲಾ ಜನತೆ ಹಲವು ದಿನಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಇದರ ಪರಿಶೀಲನೆಗೆ ಖುದ್ದು ನ್ಯಾಯಮೂರ್ತಿಗಳೇ ರಸ್ತೆಗಿಳಿದಿದ್ದಾರೆ.

ಗುರುವಾರ ರಾತ್ರಿ ಮೂರು ಗಂಟೆ ಸುಮಾರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್ ಶಿಮ್ಲಾ ಪುರಸಭೆಗೆ ಹಠಾತ್ ಭೇಟಿ ನೀಡಿದ್ದರು. ಅಲ್ಲಿದ್ದ ದೂರು ಪುಸ್ತಕವನ್ನು ಪರಿಶೀಲಿಸಿದ ಅವರು, ನೀರಿನ ಕೊರತೆ ಉಂಟಾಗಿರುವ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಅಷ್ಟೇ ಅಲ್ಲಾ, ಶಿಮ್ಲಾ ನಗರದ ವಿವಿಧ ಭಾಗಗಳಿಗೆ ತೆರಳಿದ ನ್ಯಾಯಮೂರ್ತಿಗಳು, ಸಾರ್ವಜನಿಕರಿಗೆ ಕೂಡಲೇ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅದರಂತೆ ಶುಕ್ರವಾರದಂದು ಪೊಲೀಸ್ ಭದ್ರತೆಯೊಂದಿಗೆ ವಿವಿಧ ಬಡಾವಣೆಗಳಿಗೆ ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳೇ ರಸ್ತೆಗಿಳಿದಿದ್ದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರವಾಸಿಗರ ಸ್ವರ್ಗ ಎನಿಸಿರುವ ಶಿಮ್ಲಾದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಅಲ್ಲಿನ ನಿವಾಸಿಗಳು ‘ಪ್ರವಾಸಿಗರೇ ಸದ್ಯಕ್ಕೆ ಶಿಮ್ಲಾಕ್ಕೆ ಬರಬೇಡಿ’ ಎಂದು ಮನವಿ ಮಾಡಿಕೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...